ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಭಾರತದಿಂದ ಪ್ರಯಾಣಿಕರು ದೇಶದೊಳಕ್ಕೆ ಪ್ರವೇಶಿಸದಂತೆ ಶ್ರೀಲಂಕಾ ನಿರ್ಬಂಧ ವಿಧಿಸಿವೆ.
ಬ್ರಿಟನ್, ಯುಎಇ, ಆಸ್ಟ್ರೇಲಿಯಾ, ಸಿಂಗಪುರ ಸೇರಿದಂತೆ ಹಲವು ದೇಶಗಳು ಈಗಾಗಲೇ ಭಾರತ ಮತ್ತು ದಕ್ಷಿಣ ಏಷ್ಯಾ ದೇಶಗಳ ಪ್ರಯಾಣಿಕರ ಮೇಲೆ ನಿರ್ಬಂಧ ಹೇರಿದೆ. ಭಾರತದಲ್ಲಿ ಸೋಂಕು ಹೆಚ್ಚುತ್ತಿರುವುದರಿಂದ ಭಾರತದಿಂದ ಆಗಮಿಸುವ ಪ್ರಯಾಣಿಕರು ಶ್ರೀಲಂಕಾ ಪ್ರವೇಶಿಸದಂತೆ ನಿರ್ಬಂಧ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರವು ಗುರುವಾರ ತಿಳಿಸಿದೆ.