ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ (ಫೆ.23) 18 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 53 ಮಂದಿ ಬುಧವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,306 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಬುಧವಾರ ಒಂದು ಸಾವು ಸಂಭವಿಸಿದೆ. ಅವರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,844 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 189 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.38ಕ್ಕೆ ಇಳಿದಿದೆ.