ಹೊಸ ದಿಗಂತ ಆನ್ ಲೈನ್ ಡೆಸ್ಕ್:
ನಗರಸಭೆ ಅಧ್ಯಕ್ಷರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಐಸೊಲೇಷನ್ನಲ್ಲಿ ಇರಿಸಲಾಗಿದೆ.
ಇತ್ತೀಚೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅಧ್ಯಕ್ಷೆಗೆ ಎರಡು ದಿನಗಳಿಂದ ಅನಾರೋಗ್ಯ ಕಾಣಿಸಿಕೊಂಡಿತ್ತು. ಅದರಂತೆ ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಪರೀಕ್ಷೆ ಒಳಪಟ್ಟಿದ್ದ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ಕೂಡಲೇ ಅವರನ್ನು ಐಸೊಲೇಷನ್ನಲ್ಲಿ ಇರಿಸಲಾಗಿದೆ.
ಅಧ್ಯಕ್ಷೆ ಸಂಪರ್ಕವಿದ್ದ ನಗರಸಭೆ ಕಚೇರಿಯನ್ನು ಬಂದ್ ಮಾಡಿಲ್ಲ. ಅಲ್ಲಿನ ಸಿಬ್ಬಂದಿ ಸೇರಿದಂತೆ ಸಂಪರ್ಕಿತರನ್ನು ಕ್ವಾರಂಟೈನ್ಗೆ ಒಳಪಡಿಸದೇ ಇರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಈ ಕುರಿತು ಗಮನಹರಿಸಬೇಕು ಎಂದು ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿಬಂದಿದೆ.