ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಿಗೇ ಆರೋಗ್ಯ ಇಲಾಖೆ ರೋಗ ನಿಯಂತ್ರಣಕ್ಕೆ ಮತ್ತಷ್ಟು ಕ್ರಮಗಳನ್ನು ಕೈಗೊಂಡಿದೆ.
ಕೋವಿಡ್ ಪರೀಕ್ಷೆಗಳ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದ್ದು, ರಾಜ್ಯದ ಗಡಿ ಭಾಗಗಳಲ್ಲಿಯೂ ನಿಗಾ ಇರಿಸಲಾಗಿದೆ.
ಈ ನಡುವೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕೋವಿಡ್ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ.
ಆಸ್ಪತ್ರೆಯಲ್ಲಿ ಕೋವಿಡ್ ಬಾಧಿತರಿಗೆ ಮೀಸಲಾದ ವಾರ್ಡ್ಗೆ ಭೇಟಿ ನೀಡಿದ ಅವರು, ಅಲ್ಲಿನ ಹಾಸಿಗೆಗೆಗಳ ಲಭ್ಯತೆಯ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಂಡರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ