ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋವಿಡ್ ರೂಪಾಂತರಿ ತಳಿ ಆತಂಕ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಗೈಡ್‌ಲೈನ್ಸ್ ಪ್ರಕಾರ ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಜೊತೆಗೆ ಹೊಸ ನಿರ್ಬಂಧಗಳನ್ನು ಹೇರುವ ಅವಶ್ಯಕತೆ ಇಲ್ಲ ಎಂದು ಸರ್ಕಾರ ಹೇಳಿದೆ.
ಗೈಡ್‌ಲೈನ್ಸ್‌ನ ಪ್ರಮುಖ ಅಂಶಗಳು ಹೀಗಿವೆ..
- ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಇದ್ದು, ಕೋವಿಡ್ ಲಕ್ಷಣ ಕಂಡಲ್ಲಿ, ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಬೇಕು.
- ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಕಾರ್ಯಾಚರಣೆ ಸಿದ್ಧತೆ ಖಚಿತಪಡಿಸಿ, ಡಿ.4ನೇ ವಾರದೊಳಗೆ ಅಣಕು ಪ್ರದರ್ಶನ ಪೂರ್ಣಗೊಳಿಸಬೇಕು.
- ತೀವ್ರ ಶ್ವಾಸಕೋಶದ ತೊಂದರೆ ಹಾಗೂ ಉಸಿರಾಟದ ಸಮಸ್ಯೆ ಇರುವವರಿಗೆ ಕೋವಿಡ್ ಪರೀಕ್ಷೆ ಮಾಡಿಸಬೇಕು.
- ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳಕ್ಕೆ ಸೂಚನೆ.