SHOCKING | ಸಿಂಗಾಪುರದಲ್ಲಿ ಕೋವಿಡ್‌ ಔಟ್‌ಬ್ರೇಕ್‌, ಭಾರತದಲ್ಲಿ 257 ಕೇಸ್ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಂಗಾಪುರದಲ್ಲಿ ಕೋವಿಡ್‌ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಭಾರತದಲ್ಲಿಯೂ 257 ಕೇಸ್ ಪತ್ತೆಯಾಗಿದೆ. ಸೋಂಕಿತ ಪ್ರಕರಣಗಳು ನಿಯಂತ್ರಣದಲ್ಲಿದೆ ಮತ್ತು ಮೇ 19ರ ಹೊತ್ತಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 257 ಆಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ಆರೋಗ್ಯ ಸೇವೆಗಳ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ , ತುರ್ತು ವೈದ್ಯಕೀಯ ಪರಿಹಾರ ವಿಭಾಗ, ವಿಪತ್ತು ನಿರ್ವಹಣಾ ಕೋಶ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ  ಮತ್ತು ಕೇಂದ್ರ ಸರ್ಕಾರಿ ಆಸ್ಪತ್ರೆಗಳ ತಜ್ಞರ ಪರಿಶೀಲನಾ ಸಭೆಯ ನಂತರ ಈ ಹೇಳಿಕೆ ಬಂದಿದೆ.

ಕಳೆದ ಕೆಲವು ವಾರಗಳಲ್ಲಿ ಸಿಂಗಾಪುರ ಮತ್ತು ಹಾಂಗ್ ಕಾಂಗ್‌ನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ನಂತರ ಭಾರತವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಲಭ್ಯವಿರುವ ಮಾಹಿತಿ ಪ್ರಕಾರ, ಭಾರತದಲ್ಲಿರುವ ಬಹುತೇಕ ಪ್ರಕರಣಗಳು ಸೌಮ್ಯವಾಗಿವೆ, ತೀವ್ರವಾಗುವ ಯಾವ ಲಕ್ಷಣಗಳೂ ಗೋಚರಿಸುವುದಿಲ್ಲ. ದೇಶದ ದೊಡ್ಡ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಆಲೋಚಿಸಿದರೆ ಭಾರತದಲ್ಲಿ ಪ್ರಸ್ತುತ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆ ಎಂದು ಹೇಳಲಾಗಿದೆ.

ಈ ಎಲ್ಲಾ ಪ್ರಕರಣಗಳು ಸೌಮ್ಯವಾಗಿದ್ದು, ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಪ್ರಕರಣಗಳ ಪ್ರಮಾಣ ಹೆಚ್ಚಿದೆ. ಕಳೆದ ವಾರದಲ್ಲಿ ಕೇರಳದಲ್ಲಿ 69 ಹೊಸ ಪ್ರಕರಣಗಳು, ಮಹಾರಾಷ್ಟ್ರದಲ್ಲಿ 44 ಮತ್ತು ತಮಿಳುನಾಡು 34 ಹೊಸ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿಯೂ ಎರಡು ಸಾವುಗಳು ವರದಿಯಾಗಿವೆ, ವೈದ್ಯರ ಪ್ರಕಾರ, ಇವು ಕೋವಿಡ್ -19 ಸಾವುಗಳಲ್ಲ, ಆದರೆ ಇಬ್ಬರೂ ರೋಗಿಗಳು ಕೋವಿಡ್ -19 ಪಾಸಿಟಿವ್ ಎಂದು ಕಂಡುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!