Sunday, August 14, 2022

Latest Posts

ಕೊರೋನಾ ಬಿಕ್ಕಟ್ಟು ನಿವಾರಣೆ: ಸಿಎಂ- ಬಿ.ಎಲ್. ಸಂತೋಷ್ ಮಹತ್ವದ ಚರ್ಚೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿನ ಕೊರೋನಾ ಪರಿಸ್ಥಿತಿ ಕುರಿತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಚರ್ಚೆ ನಡೆಸಿದರು.
ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯದಲ್ಲಿನ ಕೋವಿಡ್ ನಿರ್ವಹಣೆಯ ಬಗ್ಗೆ ಸಂತೋಷ್ ಅವರ ಜೊತೆ ಒಂದು ಗಂಟೆ ಸುದೀರ್ಘ ಚರ್ಚೆ ಮಾಡಲಾಯಿತು. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರ ಸಿಗಲಿದೆ ಎಂದು ಭರವಸೆ ನೀಡಿದರು ಎಂದರು.
ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಹಾಸಿಗೆ, ಆಕ್ಸಿಜನ್ ಸೇರಿದಂತೆ ಅನೇಕ ವಿಚಾರವಾಗಿ ವಿರೋಧಗಳು ಎದುರಾಗುತ್ತಿದೆ. ಹಾಗಾಗಿ ಪಕ್ಷದ ಎಲ್ಲಾ ನಾಯಕರು ಒಟ್ಟಾಗಿ ಸಭೆ ನಡೆಸಿ ಜನರಿಗೆ ನೆರವಾಗಬೇಕು ಎಂದು ತಿಳಿಸಿದ್ದಾರೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss