ಹೊಸ ದಿಗಂತ ವರದಿ, ಮಂಗಳೂರು:
ಮಂಗಳೂರು ನಗರದಲ್ಲಿ ಮತ್ತೆ ಕೋವಿಡ್ ಹೆಚ್ಚಳವಾಗುವ ಮುನ್ಸೂಚನೆ ದೊರೆತಿದೆ. ನಗರದ ನರ್ಸಿಂಗ್ ಕಾಲೇಜೊಂದರ 10 ಮಂದಿ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಕಾಲೇಜು ವ್ಯಾಪ್ತಿಯನ್ನು ಕಂಟೈನ್ಮೆಂಟ್ ಝೋನ್ ಆಗಿ ಘೋಷಿಸಿಸಲಾಗಿದೆ.
ನಗರದಲ್ಲಿರುವ ಈ ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಗುರುವಾರ ಕೋವಿಡ್ ಪಾಸಿಟಿವ್ ಕಂಡುಬಂದಿತ್ತು. ಶುಕ್ರವಾರ ಮತ್ತೆ 8 ಮಂದಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ ಸೂಕ್ತ ಮುಂಜಾಗ್ರತಾ ಕರಮಗಳನ್ನು ಕೈಗೊಳ್ಳಲು ಕಾಲೇಜಿಗೆ ಸೂಚನೆ ನೀಡಿದೆ. ಕಾಲೇಜಿನಲ್ಲಿರುವ ಒಟ್ಟು 374 ವಿದ್ಯಾರ್ಥಿಗಳ ಸ್ವಾಬ್ ಕಲೆಕ್ಷನ್ ಮಾಡಲಾಗಿದೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿ ಡಾ.ಅಶೋಕ್ ಮಾಹಿತಿ ನೀಡಿದ್ದಾರೆ.