ಶಾಸಕ ಶಿವಾನಂದ ಪಾಟೀಲ್ ಗೆ ಕೋವಿಡ್ ಪಾಸಿಟಿವ್

ಹೊಸದಿಗಂತ ವರದಿ, ವಿಜಯಪುರ:

ಮಾಜಿ ಆರೋಗ್ಯ ಸಚಿವ, ಜಿಲ್ಲೆಯ ಬಸವನವಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಕಳೆದ ಎರಡ್ಮೂರು ದಿನಗಳ ಹಿಂದೆ ತಮ್ಮ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಆರೋಗ್ಯ ತಪಾಸಣೆ ಮಾಡಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ತಾವು 7 ದಿನಗಳ ಕಾಲ ಹೋಮ್ ಐಸೋಲೇಶನ್ ಗೆ ಒಳಗಾಗಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ಅಲ್ಲದೆ ರಾಜ್ಯದಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ 3ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷಿತರಾಗಿರಬೇಕು ಎಂದು ಅವರು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!