ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ 12 ಸಾವಿರದ ಗಡಿ ದಾಟಿದ್ದು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 12,829 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 72,474ಕ್ಕೆ ಏರಿಕೆಯಾಗಿದ್ದು ದೈನಂದಿನ ಪಾಸಿಟಿವಿಟಿ ದರವು 2.89% ದಷ್ಟಿದೆ. ಒಟ್ಟೂ 8,518 ಮಂದಿ ಸೀಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾದರವು 98.62%ದಷ್ಟಿದೆ.
ದೇಶದಾದ್ಯಂತ ಒಟ್ಟು 196.14 ಕೋಟಿ ಲಸಿಕೆ ವಿತರಿಸಲಾಗಿದೆ.