ಕೋವಿಡ್‌ ವರದಿ| ದೇಶದಾದ್ಯಂತ 13,615 ಕೇಸ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೇಶದಾದ್ಯಂತ ಕೊವಿಡ್‌ ಪ್ರಕರಣಗಳಲ್ಲಿ ಕೊಂಚ ಇಳಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ 13,615 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ 1,31,043 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 3.23%ದಷ್ಟಿದೆ. ದೇಶದಾದ್ಯಂತ ಒಟ್ಟೂ 13,265 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾದರವು 98.50% ದಷ್ಟಿದೆ.

ಇಲ್ಲಿಯವರೆಗೆ ಒಟ್ಟೂ 199 ಕೋಟಿ ಕೋವಿಡ್‌ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!