ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಶುಕ್ರವಾರ ಕೋವಿಡ್ ಪ್ರಕರಣಗಳು ಮತ್ತಷ್ಟು ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 797 ಮಂದಿಗೆ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4091ಕ್ಕೆ ಏರಿಕೆಯಾಗಿದೆ.
ಕಳೆದ 225 ದಿನಗಳ ಅವಧಿಯಲ್ಲಿ ಇದು ಅತೀ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ತಾಸುಗಳಲ್ಲಿ ಕೇರಳದ ಇಬ್ಬರು, ಮಹಾರಾಷ್ಟ್ರ, ಪುದುಚೇರಿ, ತಮಿಳ್ನಾಡಿನ ತಲಾ ಒಬ್ಬರು ಸೇರಿದಂತೆ ಐದು ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ರಾಷ್ಟ್ರೀಯ ಚೇತರಿಕೆ ದರ 98.81 ಪ್ರತಿಶತದಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ