ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ವಿಶ್ವದ ನಿದ್ದೆಗೆಡಿಸಿದ್ದ ಕೋವಿಡ್ ಭೂತ ಮತ್ತೆ ವಕ್ಕರಿಸಿದೆ. ಕೋವಿಡ್ ಉಪತಳಿ ಜೆಎನ್.1 ಭೀತಿ ಹೆಚ್ಚಾಗಿದ್ದು, ಈ ಬಾರಿಯ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ.
ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಜನರು ಒಂದೆಡೆ ಸೇರಲಿದ್ದಾರೆ. ಅದ್ಧೂರಿ ಸಂಭ್ರಮಕ್ಕೆ ಬ್ರೇಕ್ ಹಾಕಿ ಸರಳ ಆಚರಣೆಗೆ ರೂಲ್ಸ್ ಬೀಳುವ ಸಾಧ್ಯತೆ ಇದೆ.
ಹೊಸ ವರ್ಷ ಹಾಗೂ ಕ್ರಿಸ್ಮಸ್ ಗಮನದಲ್ಲಿಟ್ಟುಕೊಂಡು ಕೊರೋನಾ ಜಾಗೃತಿಗಾಗಿ ಹೊಸ ರೂಲ್ಸ್ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ. ನಾಳೆ ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು, ಹೊಸ ಮಾರ್ಗಸೂಚಿ ರಚನೆಯಾಗುವ ಸಾಧ್ಯತೆ ಇದೆ.
ಕೇರಳದಲ್ಲಿ ಜೆಎನ್.1 ಉಪತಳಿ ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದೆ.
- ಯಾವ್ಯಾವ ರೂಲ್ಸ್ ಜಾರಿಯಾಗಬಹುದು?
ಹೊಸ ವರ್ಷ, ಕ್ರಿಸ್ಮಸ್ನಲ್ಲಿ ಗುಂಪುಗೂಡುವುದಕ್ಕೆ ಬ್ರೇಕ್
ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಕಡ್ಡಾಯ
ಸ್ಯಾನಿಟೈಸರ್ ಬಳಕೆ, ಅಂತರ ಕಾಪಾಡುವುದು
ಜ್ವರ, ಶೀತ ನಿರ್ಲಕ್ಷಿಸದೇ ಕೋವಿಡ್ ಪರೀಕ್ಷೆ ಮಾಡಿಸುವುದು
ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ಗಮನ