ಕೋವಿಡ್‌ ಭೀತಿ ಹಿನ್ನೆಲೆ: ರಾಜಸ್ಥಾನದ ಜನಾಕ್ರೋಶ ಯಾತ್ರೆ ರದ್ದುಗೊಳಿಸಿದ ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕೇಂದ್ರವು ನೀಡಿದ ಕೋವಿಡ್ -19 ಸಲಹೆಯ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ತನ್ನ ಜನ ಆಕ್ರೋಶ ಯಾತ್ರೆಯನ್ನು ಸ್ಥಗಿತಗೊಳಿಸಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಗುರುವಾರ ತಿಳಿಸಿದ್ದಾರೆ.

ಡಿಸೆಂಬರ್ 4 ರಂದು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ರಾಜ್ಯವನ್ನು ಪ್ರವೇಶಿಸುವ ಕೆಲವು ದಿನಗಳ ಮೊದಲು, ಡಿಸೆಂಬರ್ 1 ರಂದು ಬಿಜೆಪಿ ರಾಜಸ್ಥಾನದಲ್ಲಿ ಜನ ಆಕ್ರೋಶ ಯಾತ್ರೆಯನ್ನು ಪ್ರಾರಂಭಿಸಿತ್ತು. ರೈತರು ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ನೀತಿಗಳ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿತ್ತು.

ಚೀನಾ ಮತ್ತು ಇತರ ಕೆಲವು ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಜಾಗರೂಕರಾಗಿರಲು ಮತ್ತು ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರುವಂತೆ ನಿರ್ದೇಶಿಸಿತ್ತು. ಜೀನೋಮ್ ಸೀಕ್ವೆನ್ಸಿಂಗ್ ಬಗ್ಗೆಯೂ ಒತ್ತು ನೀಡುವಂತೆ ಕೇಂದ್ರ ಹೇಳಿದೆ.

ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಜನಾಕ್ರೋಶ ಯಾತ್ರೆಯನ್ನು ರದ್ದುಪಡಿಸಿರುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!