ಕೇರಳಕ್ಕೆ ಮತ್ತೆ ಕೋವಿಡ್ ಶಾಕ್: ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಎಂದ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ಮತ್ತೆ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಮುಂದಿನ ಆರು ತಿಂಗಳುಗಳ ಕಾಲ ಊರ್ಜಿತದಲ್ಲಿರಲಿದೆ.

ಕೇರಳದಲ್ಲಿ ಒಂದೇ ದಿನ ಬರೋಬ್ಬರಿ 50 ಸಾವಿರ ಕೇಸ್ ವರದಿಯಾದ ಬೆನ್ನಿಗೇ ಸರ್ಕಾರ ಈ ನಿರ್ಧಾಕ್ಕೆ ಬಂದಿದೆ. ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಗರಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದುಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಏನಿದೆ ಆದೇಶದಲ್ಲಿ?

ಉದ್ಯೋಗ, ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕ ಸಭೆಗಳಲ್ಲಿ, ವಾಹನಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯವಾಗಲಿದೆ. ಇದಲ್ಲದೆ ಅಂಗಡಿಗಳು, ಸಂಸ್ಥೆಗಳು ಮತ್ತು ಥಿಯೇಟರ್‌ಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಡ್ಡಾಯವಾಗಿ ಮಾಡಬೇಕಿದೆ. ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಆಯಾ ಕಾರ್ಯಕ್ರಮಗಳ ಸಂಘಟಕರು ಇವುಗಳಿಗೆ ವ್ಯವಸ್ಥೆ ಮಾಡಬೇಕು ಎಂದು ಆದೇಶ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!