ದೇಶದಲ್ಲಿ ಕೋವಿಡ್‌ ಉಲ್ಬಣ: ಸ್ವಾತಂತ್ರ್ಯ ದಿನ ಮಾರ್ಗಸೂಚಿ ಪಾಲಿಸುವಂತೆ ಕೇಂದ್ರ ಸರ್ಕಾರ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಈ ಹಿನ್ನೆಲ್ಲೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಪ್ರಮುಖ ಸೂಚನೆಗಳನ್ನು ನೀಡಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಯಾವುದೇ ದೊಡ್ಡ ಕಾರ್ಯಕ್ರಮಗಳನ್ನು ನಡೆಸದಂತೆ ತಿಳಿಸಿದೆ.ಪ್ರತಿಯೊಬ್ಬರೂ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರ ರಾಜ್ಯಗಳಿಗೆ ತಿಳಿಸಿದೆ.

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ‘ಸ್ವಚ್ಛ ಭಾರತ’ ಅಭಿಯಾನವನ್ನು ಕೈಗೊಳ್ಳಲು ಸೂಚಿಸಿದೆ. ಸ್ವಯಂಪ್ರೇರಿತವಾಗಿ ಜನರು ಅದರಲ್ಲಿ ಭಾಗವಹಿಸುವಂತೆ ಹದಿನೈದು ದಿನ ಮತ್ತು ತಿಂಗಳ ಅವಧಿಯ ಅಭಿಯಾನವನ್ನು ಕೈಗೊಳ್ಳಲು ತಿಳಿಸಿದೆ.

ಕೊರೋನಾ ಮುನ್ನೆಚ್ಚರಿಕೆಯಾಗಿ, ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ದೊಡ್ಡ ಸಭೆಗಳನ್ನು ತಪ್ಪಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಅನುಸರಿಸುವುದು ಕಡ್ಡಾಯವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇತ್ತ ಕೇಂದ್ರ ಸರಕಾರ ಈ ವರ್ಷ ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷಕ್ಕೆ ಕಾಲಿಡುತ್ತಿರುವ ವರ್ಷವನ್ನು ಸಂಭ್ರಮದಿಂದ ಆಚರಿಸಲು ಹರ್ ಘರ್ ತಿರಂಗ ಅಭಿಯಾನವನ್ನು ಹಾಕಿಕೊಂಡಿದೆ. ಈ ಅಭಿಯಾನವು ಯಶಸ್ವಿ ಮಾಡಲು ಭರದ ಸಿದ್ಧತೆ ನಡೆಸಿದೆ.ಇದರ ನಡುವೆ ಕೊರೋನಾ ಆತನಕವು ಮನೆ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!