ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾರತದ ಪೂರ್ವ ಕರಾವಳಿ ಒಡಿಶಾದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಪುರಿ ಜಗನ್ನಾಥ ದೇವಾಲಯಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧವನ್ನು ಜೂನ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಈ ಬಗ್ಗೆ ಸಭೆ ನಡೆಸಿದ ದೇವಸ್ಥಾನದ ಆಡಳಿತ ಮಂಡಲಿ, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪುರಿ ಜಗನ್ನಾಥ ದೇವಾಲಯಕ್ಕೂ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದೇವಲಯದ ಮುಖ್ಯಸ್ಥ ಡಾ. ಕೃಷ್ಣನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಒಡಿಶಾದಲ್ಲಿ ಒಂದೇ ದಿನ 11, 732 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 6,12,224ಕ್ಕೆ ಏರಿಕೆಯಾಗಿದೆ.