Saturday, August 13, 2022

Latest Posts

ತೆಲಂಗಾಣದಲ್ಲಿ ಕೊರೋನಾ ಹೆಚ್ಚಳ: ಸಿಎಂ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಲಾಕ್ ಡೌನ್ ಜಾರಿ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ತೆಲಂಗಾಣದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ತೆಲಂಗಾಣ ಸಿಎಂಒ, ಮಂಗಳವಾರ ನಡೆಯಲಿರುವ ರಾಜ್ಯ ಸಂಪುಟ ಸಭೆಯಲ್ಲಿ ಸಾಧಕ, ಬಾಧಕಗಳನ್ನು ಚರ್ಚಿಸಲಾಗುತ್ತದೆ. ಈ ವೇಳೆ ಕೊರೋನಾ ಪ್ರಕರಣಗಳ ಸಂಖ್ಯೆಯ ಬಗ್ಗೆ ಪರಿಶೀಳನೆ ನಡೆಸಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಪ್ರಗತಿ ಭವನದಲ್ಲಿ ನಭೆ ನಡೆಯಲಿದ್ದು, ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss