ದೇಶದಲ್ಲಿ ಮತ್ತೆ ಒಂದು ಲಕ್ಷ ಗಡಿ ದಾಟಲಿದ್ಯಾ ಕೋವಿಡ್‌ ಸೋಂಕಿತರ ಸಂಖ್ಯೆ? ನಿನ್ನೆ ಪತ್ತೆಯಾದ ಸೋಂಕಿತರೆಷ್ಟು ನೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೋವಿಡ್‌ ರೂಪಾಂತರಿ ಸೋಂಕು ಒಮಿಕ್ರಾನ್‌ ನ ಹಾವಳಿ ಹೆಚ್ಚಾಗಿರುವ ನಡುವೆ ಕೋವಿಡ್‌ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 90,928 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ, ದೇಶದಲ್ಲಿ 90,928 ಹೊಸ ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,85,401ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 19206 ಮಂದಿ ಗುಣಮುಖರಾಗಿದ್ದು, ಒಟ್ಟು 3,43,41,009 ಜನ ಚೇತರಿಕೆ ಕಂಡುಕೊಂಡಿದ್ದಾರೆ.
ಬುಧವಾರ ದೇಶದಲ್ಲಿ 325 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 4,82,876 ಮಂದಿ ಮೃತಪಟ್ಟಿದ್ದಾರೆ.
ಇನ್ನು ತನ್ನ ಆರ್ಭಟ ಶುರು ಮಾಡಿರುವ ಒಮಿಕ್ರಾನ್‌ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ 226 ಹೊಸ ಒಮಿಕ್ರಾನ್‌ ಸೋಂಕಿತರು ಪತ್ತೆಯಾಗಿದ್ದಾರೆ, ದೆಹಲಿಯಲ್ಲಿ 465 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 797 ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು 26630 ಒಮಿಕ್ರಾನ್‌ ಸೋಂಕಿತರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!