ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉಡುಪಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಅಪಾಯಕಾರಿ ಹಂತ ತಲುಪುತ್ತಿದ್ದು, ನಾಗರಿಕರು ಇನ್ನಷ್ಟು ಎಚ್ಚರಿಕೆ ವಹಿಸುವಂತೆ ಖುದ್ದು ಜಿಲ್ಲಾಧಿಕಾರಿ ಫೇಸ್ ಬುಕ್ ಲೈವ್ ಮೂಲಕ ವಿಡಿಯೋ ಸಂದೇಶದ ಮೂಲಕ ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಪರಿಸ್ಥಿತಿ ಕೈಮೀರುವ ಹಂತ ತಲುಪಿದೆ. ಜೊತೆಗೆ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾದರೆ ಯಾರಿಗೂ ಎನೂ ಮಾಡಲಾಗುವುದಿಲ್ಲ, ಹೀಗಾಗಿ ರೋಗದ ಬಗ್ಗೆ ಎಚ್ಚರಿಕೆ ಅಗತ್ಯ. ಜನತೆ ಕೊರೋನಾ ನಿಯಂತ್ರಣ ಕ್ಕಾಗಿ ಜನತೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಬಹಳಷ್ಟು ಮಂದಿ ಸೋಂಕಿನ ಲಕ್ಷಣ ಕಂಡು ಬಂದರೂ ಸುಮ್ಮನಿರುತ್ತಾರೆ. ತಪಾಸಣೆ ಮಾಡದೇ ೧೫ ದಿನ ಮನೆಯಲ್ಲೇ ಇದ್ದು ನಂತರ ಪರಿಸ್ಥಿತಿ ತೀರಾ ಹದಗೆಟ್ಟ ಬಳಿಕ ನೇರವಾಗಿ ಐಸಿಯುಗೆ ದಾಖಲಾಗುತ್ತಿದ್ದಾರೆ. ಇಂತವರ ಸಂಖ್ಯೆ ಈಗ ಹೆಚ್ಚಳವಾಗಿದೆ. ಇದೇ ರೀತಿ ಪರಿಸ್ಥಿತಿ ಮುಂದುವರಿದರೆ ಸಾಂಕ್ರಮಿಕ ರೋಗದ ನಿಯಂತ್ರಣ ಕೂಡಾ ಕಷ್ಟ ಎಂದಿರುವ ಅವರು, ಒಬ್ಬ ಸದಸ್ಯನಿಗೆ ಸೋಂಕು ತಗುಲಿದರೆ ಮನೆ ಮಂದಿಗೆಲ್ಲರಿಗೂ ರೋಗ ಹರಡುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿದ್ದವರು ವೈರಸ್ ನಿಂದ ಪಾರಾಗುತ್ತಾರೆ, ಆದರೆ ಹಿರಿಯರು ಮಕ್ಕಳಿಗೆ ಆರೋಗ್ಯ ನಿರೋಧಕ ಶಕ್ತಿ ಕಡಿಮೆ ಇರುವುದ್ರಿಂದ ಅವರು ಅಪಾಯಕ್ಕೆ ತುತ್ತಾಗುತ್ತಾರೆ. ಹೀಗಾಗಿ ಮನೆಯಲ್ಲಿರುವ ಮಕ್ಕಳನ್ನು , ಹಿರಿಯರನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಕೊರೋನಾ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.