ಕೋವಿಡ್‌ ಪ್ರಕರಣಗಳಲ್ಲಿ ಅಲ್ಪ ಕುಸಿತ: 3,207 ಹೊಸ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದ‌ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಕೊಂಚ ಇಳಿಮುಖವಾಗಿದ್ದು ಕಳೆದ 24 ಗಂಟೆಗಳಲ್ಲಿ 3,207 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು 29 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ 20,403 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು 0.95% ದೈನಂದಿನ ಪಾಸಿವಿಟಿ ದರ ದಾಖಲಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 3,410 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಲ್ಲಿಯವರೆಗೆ 4,25,60,905 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶದಾದ್ಯಂತ ಒಟ್ಟೂ 190.34 ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!