COVID UPDATE | ಭಾರತದಲ್ಲಿ 7,633 ಹೊಸ ಪ್ರಕರಣ, 61 ಸಾವಿರ ದಾಟಿದ ಸಕ್ರಿಯ ಪ್ರಕರಣಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ದೇಶದಾದ್ಯಂತ ಕೋವಿಡ್ ಭೀತಿ ಮತ್ತೆ ಎದುರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7,633 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 61,233 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 11 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,31,152ಕ್ಕೆ ತಲುಪಿದೆ.

ಇಂದು ಲಭ್ಯವಾದ ಮಾಹಿತಿ ಪ್ರಕಾರ, ದೆಹಲಿ ಮತ್ತು ಕೇರಳದಲ್ಲಿ ತಲಾ ನಾಲ್ವರು, ಹರಿಯಾಣ, ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಸಚಿವಾಲಯ ಹೇಳಿದೆ.

ದೇಶದಲ್ಲಿ ಈವರೆಗೆ ಒಟ್ಟು 4,48,34,859 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಈ ಪೈಕಿ ಶೇ 98.68 ರಷ್ಟು ಅಂದರೆ 4,42,42,474 ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ದರ ಶೇ 1.18 ರಷ್ಟಿದ್ದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.14ರಷ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!