ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

COVID UPDATE: ಕೊರೋನಾ ಇಲ್ಲವೆಂದು ಮೈಮರೆತು ಓಡಾಡಬೇಡಿ! ನಿನ್ನೆ ಎಷ್ಟು ಮಂದಿಗೆ ಸೋಂಕು ತಗುಲಿದೆ ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 41,383 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ  42,015 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಇಳಿಕೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 41,383 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,12,57,720ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 38,652 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ3,04,29,339 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ4,09,394 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 507 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,18,987 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss