ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,47,417 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ನಿನ್ನೆ ಕೊರೋನಾ ಸೋಂಕಿನಿಂದ 442 ಮಂದಿ ಮೃತಪಟ್ಟಿದ್ದಾರೆ. ಒಟ್ಟಾರೆ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 3,63,17,927 ಕ್ಕೆ ಏರಿಕೆಯಾಗಿದೆ. ಕೋವಿಡ್‌ನಿಂದ ಈವರೆಗೂ ಮೃತಪಟ್ಟವರ ಸಂಖ್ಯೆ 4,84,035ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,17,531ರಷ್ಟಿದ್ದು, 85,825 ಮಂದಿ ಗುಣಮುಖರಾಗಿದ್ದಾರೆ.