Wednesday, June 29, 2022

Latest Posts

ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ : ಒಂದೇ ದಿನ 83 ಪ್ರಕರಣ‌ ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಬುಧವಾರ 83 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 33, ಸೋಮವಾರಪೇಟೆ ತಾಲೂಕಿನಲ್ಲಿ 31 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 19 ಪ್ರಕರಣಗಳು‌ ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 31,497ರಷ್ಟಾಗಿದ್ದು, ಈ ಪೈಕಿ 30,707 ಮಂದಿ ಗುಣಮುಖರಾಗಿದ್ದಾರೆ. ಪ್ರಸಕ್ತ 396 ಸಕ್ರಿಯ ಪ್ರಕರಣಗಳಿರುವುದಾಗಿ ಅವರು ವಿವರಿಸಿದ್ದಾರೆ
ಕಳೆದ 24ಗಂಟೆಗಳಲ್ಲಿ 55 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.ಇದರೊಂದಿಗೆ ಸತ್ತವರ ಸಂಖ್ಯೆ 394ಕ್ಕೆ ಏರಿಕೆಯಾಗಿದೆ.ಜಿಲ್ಲೆಯಲ್ಲಿ ಪ್ರಸಕ್ತ 84 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ದರ ಶೇ.3.81ರಷ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss