Tuesday, June 28, 2022

Latest Posts

ಕೊಡಗು: ಬುಧವಾರ 59 ಕೋವಿಡ್ ಪ್ರಕರಣಗಳು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಬುಧವಾರ 59 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 11,ಸೋಮವಾರಪೇಟೆ ತಾಲೂಕಿನಲ್ಲಿ 36 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 12 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 31073ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 43 ಮಂದಿ‌ ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 30,387ರಷ್ಟಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 297 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ ಒಬ್ಬರುಸಾವಿಗೀಡಾಗುವುದರೊಂದಿಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 389ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 89ರಷ್ಟಿದ್ದು, ಪಾಸಿಟಿವಿಟಿ ದರ ಶೇ.2.14ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ನೀಡಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss