ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಡಿಮೆಯಾಗುತ್ತಿಲ್ಲ ಕೊರೋನಾ ಸೋಂಕಿತರ ಸಂಖ್ಯೆ: ಮನೆಯಿಂದ ಹೊರಗೆ ಕಾಲಿಡುವ ಮುನ್ನ ಒಮ್ಮೆ ಯೋಚಿಸಿ..

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 4,03,738 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ4,03,738 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ3,86,444 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ1,83,17,404 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 37,36,648 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 4,092 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,42,362 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss