ಕೊರೊನಾ ಕಳವಳ: 24ಗಂಟೆಗಳಲ್ಲಿ 6,155 ಹೊಸ ಪ್ರಕರಣಗಳು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 6,155 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ. ನಿನ್ನೆಗೆ ಹೋಲಿಸಿದರೆ 105 ಪ್ರಕರಣಗಳು ಹೆಚ್ಚಿವೆ.

ತಾಜಾ ಪ್ರಕರಣಗಳೊಂದಿಗೆ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,194 ಕ್ಕೆ ತಲುಪಿದೆ. ಪ್ರಸ್ತುತ ದೈನಂದಿನ ಧನಾತ್ಮಕ ದರವು 5.63% ಆಗಿದೆ. ಕಳೆದ 24 ಗಂಟೆಗಳಲ್ಲಿ 3,253 ಜನರು ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ನಿಂದ 11 ಜನರು ಸಾವನ್ನಪ್ಪಿದ್ದಾರೆ.

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಈಗಾಗಲೇ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಪರಿಶೀಲನೆ ನಡೆಸಿದರು. ಪರೀಕ್ಷೆಗಳು ಮತ್ತು ಲಸಿಕೆಗಳನ್ನು ಹೆಚ್ಚಿಸಬೇಕು. 10 ಮತ್ತು 11ರಂದು ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸುವಂತೆ ತಿಳಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!