ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆ ನಡುವೆ ಕೊರೊನಾ ಕ್ರಿಮಿಯ ಅಬ್ಬರ ಜೋರಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಇದರ ಜೊತೆ ದೇಶದ ಹಲವು ರಾಜ್ಯದಲ್ಲೂ ಸೋಂಕಿನ ಸಂಖ್ಯೆ ಹೆಚ್ಚು ಆಗುತ್ತಿರುವುದು ತಲೆ ನೋವಾಗಿ ಪರಿಣಮಿಸಿದೆ. ರಾಜ್ಯಕ್ಕೆ ಕೊರೊನಾ ರೀ ಎಂಟ್ರಿ ಕೊಟ್ಟಿದೆ. ರಾಜ್ಯ ರಾಜಧಾನಿಯನ್ನೇ ತನ್ನ ಅಡ್ಡ ಮಾಡಿಕೊಂಡು ಸೋಂಕಿನ ಸುಂಟರಗಾಳಿ ಹಬ್ಬಿಸುತ್ತಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, ಸೈಲೆಂಟ್ ಆಗಿಯೇ ತನ್ನ ಅಧಿಪತ್ಯ ಸಾಧಿಸುತ್ತಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 200ರ ಗಡಿ ದಾಟಿದ್ದು, ಆತಂಕ ಮೂಡಿಸಿದೆ.
ರಾಜ್ಯದಲ್ಲಿ ಮತ್ತೆ ಚೀನಾ ತಳಿಯ ಗುಮ್ಮ ಕಂಗೆಡಿಸಿದೆ. ಮುಂಗಾರು ಮಳೆಯ ಜೊತೆ ಜೊತೆಯಲ್ಲೆ ಕೊರೊನಾ ಹಾವಳಿ ಕೂಡ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗಿದೆ. ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 114 ಕೇಸ್ಗಳು ದಾಖಲಾಗಿದೆ.