Thursday, August 18, 2022

Latest Posts

ಕೋವಿಡ್ ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ ತಾಯಿ

 ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರಿಗೆ ಕೊರೋನಾ ಮೊದಲ ಡೋಸ್ ಹಾಕಲಾಗಿದ್ದು ,  ಈ ಬಗ್ಗೆ ಟ್ವಿಟರ್ ನಲ್ಲಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. ಹಾಗೆ ದೇಶದ ಜನತೆಗೆ ಕೊರೋನಾ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಧಾನಿ ಮನವಿ ಮಾಡಿದ್ದಾರೆ.
ನನ್ನ ತಾಯಿ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ ಎಂಬುದನ್ನು ಹೇಳಲು ಖುಷಿಯಾಗುತ್ತದೆ. ಅರ್ಹರು ಕೊರೋನಾ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಬೇರೆಯವರನ್ನು ಪ್ರೋತ್ಸಾಹಿಸಬೇಕು ಎಂದು ಮೋದಿ ವಿನಂತಿಸಿಕೊಂಡಿದ್ದಾರೆ.
ಭಾರತದಲ್ಲಿ ಹೊಸ ವರ್ಷಾರಂಭದಲ್ಲಿ ಜನವರಿ 16ರಂದು ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಕೋವಿಡ್-19 ಲಸಿಕೆ ವಿತರಣೆಗೆ ಚಾಲನೆ ನೀಡಲಾಯಿತು. ಎರಡನೇ ಹಂತದಲ್ಲಿ ಮಾರ್ಚ್ 1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!