ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸದ್ದಿಲ್ಲದೇ ಹೆಚ್ಚಾಗುತ್ತಿರುವ ಮಹಾಮಾರಿ ಕೊರೋನಾ ತಡೆಗಟ್ಟಲು ಇಂದು ರಾಜ್ಯ ಸರ್ಕಾರ ವ್ಯಾಕ್ಸಿನೇಷನ್‌ಗೆ ಮುಂದಾಗಿದೆ.
ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಎರಡನೇ ಲಸಿಕೆ ಪಡೆದವರು ಮೂರನೇ ಡೋಸ್ ಆಗಿ ಕಾರ್ಬೆವ್ಯಾಕ್ಸ್ ಲಸಿಕೆ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರ ಒಟ್ಟಾರೆ 30 ಸಾವಿರ ಡೋಸ್ ಕೊರ್ಬೆವ್ಯಾಕ್ಸ್ ಲಸಿಕೆ ಸರಬರಾಜು ಮಾಡಿದೆ.
ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದು ಆರು ತಿಂಗಳಾದವರು ಅಥವಾ 26 ತಿಂಗಳು ಕಳೆದಿದ್ದು, ಬೂಸ್ಟರ್ ಡೋಸ್ ಪಡೆಯದವರು ಈ ಲಸಿಕೆ ಪಡೆಯಬಹುದಾಗಿದೆ.
ಜಿಲ್ಲಾ ಆಸ್ಪತ್ರೆಗಳು ಹಾಗೂ ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ವ್ಯಾಕ್ಸಿನ್ ಡ್ರೈವ್ ಆರಂಭಿಸಲಾಗಿದೆ. 60 ವರ್ಷ ದಾಟಿದವರು ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಆದ್ಯತೆ ನೀಡಲಾಗಿದೆ.