spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಿಲ್ಲೆಯ ಎಲ್ಲ ನಾಗರೀಕರಿಗೂ ಕೊರೋನ ನಿರೋಧಕ ಲಸಿಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………...

ದಿಗಂತ ವರದಿ ಶಿವಮೊಗ್ಗ :

ಶೀಘ್ರದಲ್ಲೇ ಹಂತಹಂತವಾಗಿ ಜಿಲ್ಲೆಯ ಎಲ್ಲ ನಾಗರೀಕರಿಗೂ ಕೊರೋನ ನಿರೋಧಕ ಲಸಿೆಯನ್ನು ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ನಗರದ ಪೊಲೀಸ್ ಕವಾಯತು ಸಭಾಂಗಣದಲ್ಲಿ ಪೊಲೀಸ್ ಕುಟುಂಬದ ಸದಸ್ಯರುಗಳಿಗಾಗಿ ಸೋಮವಾರ ಏರ್ಪಡಿಸಲಾಗಿದ್ದ ವಿಶೇಷ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕೊರೋನ ಸೋಂಕ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೆ ದೆೀಶದ ಪ್ರತಿಯೊಬ್ಬ ಪ್ರಜೆಗೆ ಲಸಿಕೆ ಹಾಕಲು ತೀರ್ಮಾನಿಸಿದೆ. ಆರಂಭಿಕ ಹಂತದಲ್ಲಿ ಸಾರ್ವಜನಿಕ ಸೇವಾ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಲಸಿಕೆಯನ್ನು ಮೊದಲ ಆದ್ಯತೆಯಾಗಿ ನೀಡಲಾಗಿದೆ. ಆರೋಗ್ಯ, ಪೊಲೀಸ್, ಕಂದಾಯ, ಮಹಿಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ಥಳೀಯ ಸಂಸ್ಥೆಗಳ ಅಧಿಕಾರಿ-ಸಿಬ್ಬಂದಿಗಳು, ಪೌರಸೇವಾ ಕಾರ್ಮಿಕರು ಸೇರಿದಂತೆ ಪ್ರಮುಖ ಇಲಾಖೆಗಳ ನೌಕರರಿಗೆ ಈಗಾಗಲೆ ಲಸಿಕೆ ವಿತರಿಸಲಾಗಿದೆ. ಪ್ರಸ್ತುತ ಅವರ ಕುಟುಂಬಗಳ ಅವಲಂಬಿತರಿಗೂ ಲಸಿಕೆ ಹಾಕಲಾಗುತ್ತಿದೆ ಎಂದರು.
ಇದುವರೆಗೆ 45ವರ್ಷ ಮೇಲ್ಪಟ್ಟ ವಯಸ್ಸಿನ ನಾಗರೀಕರಿಗೆ ಲಸಿಕೆಯನ್ನು ಉಚಿತವಾಗಿ ವಿತರಿಸಲಾಗುತ್ತಿತ್ತು. ಈಗ ದೇಶದಾದ್ಯಂತ 18ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುವುದು. ಲಸಿಕೆ ಸಂಪೂರ್ಣ ಉಚಿತ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss