ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜು, ಜಂಟಿ ನಿರ್ದೇಶಕರ ಕಚೇರಿಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಕೊರೋನಾ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 2ನೇ ಅಲೆಯು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ಎಲ್ಲಾ ಜಂಟಿ ನಿರ್ದೇಶಕರ ಕಚೇರಿಯ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಠಿಯಿಂದ, ಸಂಬಂಧಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ವ್ಯಾಕ್ಸಿನ್ ಅನ್ನು ಹಾಕಿಸಿಕೊಳ್ಳಲು ಸೂಚಿಸಿದ್ದಾರೆ.