ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, June 24, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊವಿನ್ ಪೋರ್ಟಲ್ ಡೇಟಾ ಉಲ್ಲಂಘನೆ: ವದಂತಿ ತಿರಸ್ಕರಿಸಿದ ಕೇಂದ್ರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊವಿನ್ ಪೋರ್ಟಲ್‌ನಲ್ಲಿ ಡೇಟಾ ಉಲ್ಲಂಘನೆ ಕುರಿತು ಹರಡುತ್ತಿರುವ ವರದಿಗಳನ್ನು ನಕಲಿ ಎಂಬುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಕೋವಿನ್ ಎಲ್ಲಾ ವ್ಯಾಕ್ಸಿನೇಷನ್ ಡೇಟಾವನ್ನು ಸುರಕ್ಷಿತ ಡಿಜಿಟಲ್ ಪರಿಸರದಲ್ಲಿ ಸಂಗ್ರಹಿಸಿಡುತ್ತದೆ ಎಂದು ಒತ್ತಿ ಹೇಳಿದೆ.
ಆರೋಗ್ಯ ಸಚಿವಾಲಯದ ಕೋವಿನ್ ವ್ಯವಸ್ಥೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳತ್ತ ಗಮನ ಹರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಕೋವಿನ್ ಪ್ಲಾಟ್‌ಫಾರ್ಮ್ ಅನ್ನು ಹ್ಯಾಕ್ ಮಾಡಲಾಗಿದೆಯೆಂದು ಕೆಲವು ಆಧಾರರಹಿತ ಮಾಧ್ಯಮ ವರದಿಗಳು ಬಂದಿವೆ. ಈ ವರದಿಗಳು ನಕಲಿಯಾಗಿದೆ. ಆದರೂ, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಇಜಿವಿಎಸಿ ಈ ವಿಷಯವನ್ನು ಕಂಪ್ಯೂಟರ್ ತುರ್ತು ಪರಿಸ್ಥಿತಿಯಡಿ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರತಿಕ್ರಿಯೆ ತಂಡ (ಮಿಲ್ವೈ)ದ ಮೂಲಕ ತನಿಖೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss