ಕೋವಿಶೀಲ್ಡ್​​ ಕೊರೊನಾ ಲಸಿಕೆಯಿಂದ ಅಡ್ಡಪರಿಣಾಮವಿದೆ ಎಂದು ಒಪ್ಪಿಕೊಂಡ ಸಂಸ್ಥೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೋವಿಶೀಲ್ಡ್‌  ಔಷಧಿಯಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ.

ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆದಿದ್ದು, ಲಸಿಕೆಯಿಂದ ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮ ಉಂಟಾಗಬಹುದು, ಆದರೆ ಲಸಿಕೆ ಪಡೆಯದವರಲ್ಲೂ ಟಿಟಿಎಸ್ (ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್)  ಕಾಣಿಸಿಕೊಳ್ಳಬಹುದು. ಆದ್ದರಿಂದ ಈ ಕುರಿತು ವಿಸ್ತೃತ ಅಧ್ಯಯನದ ಅಗತ್ಯವಿದೆ ಎಂದು ಅಸ್ಟ್ರಾಜೆನೆಕಾ ಪ್ರತಿಪಾದಿಸಿದೆ.

ಇದೇ ಆಸ್ಟ್ರಾಜೆನಿಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್‌ಸ್ಟಿಟ್ಯೂಟ್‌ ಕೋವಿಶೀಲ್ಡ್‌ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಮತ್ತು ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಕೂಡಾ ಇದೇ ಆಗಿದ್ದ ಕಾರಣ, ಲಂಡನ್‌ ನ್ಯಾಯಾಲಯದಲ್ಲಿ ಆಸ್ಟ್ರಾಜೆನಿಕಾ ನೀಡಿದ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಟಿಟಿಎಸ್​ ದೇಹದಲ್ಲಿ ರಕ್ತ ಹೆಪ್ಪುಗಟ್ಟುವಂತೆ ಮಾಡುತ್ತದೆ. ಜೊತೆಗೆ ಪ್ಲೇಟ್‌ಲೆಟ್ಸ್​ ದಿನದಿಂದ ದಿನಕ್ಕೆ ಕುಸಿಯಲು ಆರಂಭಿಸುತ್ತದೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಸ್ಟ್ರೋಕ್ ಅಥವಾ ಹೃದಯ ಸ್ತಂಭನದ ಸಾಧ್ಯತೆಗಳು ಹೆಚ್ಚಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!