ಹೊಸದಿಗಂತ ವರದಿ ಮಡಿಕೇರಿ:
ದಕ್ಷಿಣ ಕೊಡಗಿನಲ್ಲಿ ಹುಲಿಯ ಅಟ್ಟಹಾಸಕ್ಕೆ ಮತ್ತೊಂದು ಹಸು ಬಲಿಯಾಗಿದೆ.
ಪೊನ್ನಂಪೇಟೆ ತಾಲೂಕಿನ ಬೆಸಗೂರು ಗ್ರಾಮದಲ್ಲಿ ಹುಲಿ ದಾಳಿ ಮಾಡಿದ್ದು, ಬಲ್ಲಿಮಾಡ ಸಂಪತ್ ಅವರಿಗೆ ಸೇರಿದ ಹಸುವನ್ನು ಬಲಿ ಪಡೆದಿದೆ.
ಹಸು ಕಾಣದೇ ಇದ್ದಾಗ ಹುಡುಕುವ ವೇಳೆ ಹಸುವಿನ ಅರ್ಧ ತಿಂದ ಕಳೇಬರ ತೋಟದಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಪೊನ್ನಂಪೇಟೆ ವಿಭಾಗದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಹುಲಿ ಸೆರೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.