ಐಸಿಯು ವಾರ್ಡ್‌ಗೆ ಎಂಟ್ರಿ ಕೊಟ್ಟ ಹಸು: ಮುಂದೇನಾಯ್ತು? ಈ ವಿಡಿಯೋ ನೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸರ್ಕಾರಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ಎಷ್ಟು ಕೆಟ್ಟದಾಗಿದೆ ಎಂಬುದಕ್ಕೆ ಸದಾ ಒಂದಿಲ್ಲೊಂದು ಉದಾಹರಣೆ ಸಿಗುತ್ತಲೇ ಇರುತ್ತದೆ. ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಪ್ರಜ್ಞಾಹೀನನಾದ ಯುವಕನ ರಕ್ತವನ್ನು ನಾಯಿಯೊಂದು ನೆಕ್ಕಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಇದೀಗ ಆಸ್ಪತ್ರೆಯೊಳಕ್ಕೆ ಹಸುವೊಂದು ಎಂಟ್ರಿ ಕೊಟ್ಟಿರುವ ವಿಡಿಯೋ ಸದ್ದು ಮಾಡುತ್ತಿದೆ.

ಮಧ್ಯಪ್ರದೇಶದ ರಾಜ್‌ಗಢ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯೊಂದರಲ್ಲಿ ಹಸು ನಡೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಈ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಆಸ್ಪತ್ರೆಯ ಐಸಿಯು ವಾರ್ಡ್‌ಗೆ ಹಸು ಪ್ರವೇಶಿಸುವವರೆಗೂ ಸಿಬ್ಬಂದಿ ಏನು ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಕೂಡ ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದಾರೆ. ತಕ್ಷಣ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ, ಘಟನೆ ಕುರಿತು ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಅಲ್ಲದೆ, ಭದ್ರತಾ ಸಂಸ್ಥೆಗೂ ನೋಟಿಸ್ ಜಾರಿ ಮಾಡಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!