September 23, 2026
Wednesday, September 23, 2026
spot_img

ಐಟಿ ಹಬ್‌ನಲ್ಲಿ ಟ್ರಾಫಿಕ್ ಬ್ಲಾಕ್ ಮಾಡಿದ ಹಸುಗಳು! ಬೇಜವಾಬ್ದಾರಿ ಮಾಲೀಕನ ವಿರುದ್ಧ FIR

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಎಷ್ಟಿರುತ್ತೆ ಅನ್ನೋದು ಇಲ್ಲಿ ವಾಸಿಸುವ ಪ್ರತಿಯೊಬ್ಬ ವಾಹನ ಸವಾರರ ಅನುಭವಕ್ಕೂ ಬಂದಿರುತ್ತೆ. ಜಗತ್ತಿನ ಅತ್ಯಂತ ಭಾರೀ ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಸಾಮಾನ್ಯವಾಗಿ ವಾಹನಗಳ ಸಂಖ್ಯೆ ಹೆಚ್ಚಾಗಿ ಟ್ರಾಫಿಕ್ ಜಾಮ್ ಆಗುವುದನ್ನು ನೋಡಿದ್ದೇವೆ. ಆದರೆ ಬೆಂಗಳೂರಿನಲ್ಲಿ ಹಸುಗಳಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದಕ್ಕೆ ಕಾರಣವಾದ ಹಸುಗಳ ಮಾಲೀಕನ ಮೇಲೆ ಎಫ್‌ಐಆರ್ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮಾರತ್ತಹಳ್ಳಿ ರಿಂಗ್ ರಸ್ತೆಯಲ್ಲಿ ಹಸುಗಳ ದರ್ಬಾರ್

ಮಾರತ್ತಹಳ್ಳಿ ರಿಂಗ್ ರಸ್ತೆಯ ಕಲಾಮಂದಿರದ ಬಳಿ ಇದ್ದಕ್ಕಿದ್ದಂತೆ 8 ರಿಂದ 10 ಹಸುಗಳು ರಸ್ತೆಯ ಮಧ್ಯಕ್ಕೆ ಬಂದು ನಿಂತಿದ್ದವು. ಬೆಳಗಿನ ಪೀಕ್ ಅವರ್ಸ್‌ನಲ್ಲಿ ಹೊರ ವರ್ತುಲ ರಸ್ತೆಯ ಮಧ್ಯದಲ್ಲೇ ಹಸುಗಳು ಬೀಡುಬಿಟ್ಟಿದ್ದರಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಚೇರಿ ಹಾಗೂ ಐಟಿ ಪಾರ್ಕ್‌ಗಳಿಗೆ ತೆರಳುತ್ತಿದ್ದ ನೂರಾರು ವಾಹನ ಸವಾರರು ರಸ್ತೆಯಲ್ಲೇ ಸಿಲುಕಿ ಪರದಾಡುವಂತಾಯಿತು. ಈ ವೇಳೆ ಸ್ಥಳಕ್ಕೆ ಬಂದ ಹೆಚ್‌ಎಎಲ್ (HAL) ಸಂಚಾರ ಠಾಣೆ ಪೊಲೀಸರು ಹರಸಾಹಸ ಪಟ್ಟು ಹಸುಗಳನ್ನು ಪಕ್ಕಕ್ಕೆ ಸರಿಸಿ ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ.

ಇದನ್ನೂ ಓದಿ:

ಬೇಜವಾಬ್ದಾರಿ ಮಾಲೀಕನ ಮೇಲೆ ಎಫ್‌ಐಆರ್

ರಸ್ತೆಯಲ್ಲಿ ಹಸುಗಳನ್ನು ಹಾಗೆಯೇ ಬಿಟ್ಟು ಸಂಚಾರಕ್ಕೆ ಅಡ್ಡಿಪಡಿಸಿದ ಮಾಲೀಕ ಯಾರು ಎಂಬುದನ್ನು ಪತ್ತೆಹಚ್ಚಲು ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ತನಿಖೆ ನಡೆಸಿದಾಗ ಈ ಹಸುಗಳು ಮಾರತ್ತಹಳ್ಳಿಯ ಅಶ್ವಥನಗರದ ನಿವಾಸಿಯಾದ ಸಂತೋಷ್ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಹಿಂದೆ ಕೂಡ ನಿರ್ಲಕ್ಷ್ಯತನ ತೋರಿ ಹಸುಗಳನ್ನು ಸಾರ್ವಜನಿಕ ರಸ್ತೆಗೆ ಬಿಡಬೇಡಿ ಎಂದು ಪೊಲೀಸರು ಆತನಿಗೆ ಎಚ್ಚರಿಕೆ ನೀಡಿದ್ದರು. ಆದರೂ ಬೇಜವಾಬ್ದಾರಿತನ ಮುಂದುವರಿಸಿದ ಹಿನ್ನೆಲೆಯಲ್ಲಿ ಪೊಲೀಸರು ಈಗ ಸಂತೋಷ್ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !