ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ತೆಲಂಗಾಣದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.ರಾಷ್ಟ್ರಪತಿ ಭವನ ಸೋಮವಾರ ಈ ಆದೇಶ ಹೊರಡಿಸಿದೆ.
ರಾಧಾಕೃಷ್ಣನ್, ಕೊಯಂಬಟೋದಿಂದ ಎರಡು ಬಾರಿ ಸಂಸತ್ ಸದಸ್ಯ. ಬಿಜೆಪಿ ಅಭ್ಯರ್ಥಿಯಾಗಿ, ಜಾರ್ಖಂಡ್ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡರು.
ನಿರ್ಗಮಿತ ರಾಜ್ಯಪಾಲ ತಮಿಳಿಸೈ ಸೋಮವಾರ ರಾಜೀನಾಮೆ ನೀಡಿದ್ದು ಮತ್ತು ತಮಿಳುನಾಡಿನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ.