RECRUITMENT | ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ವಿವಿಧ 163 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 163 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಡಿಪ್ಲೋಮಾ, ಎಲ್‌ಎಲ್‌ಬಿ, ಸ್ನಾತಕೋತ್ತರ ಪದವಿ, 12ನೇ ತರಗತಿ, 10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 1,77,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್‌ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!