ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಪಿಐ ಹಿರಿಯ ನಾಯಕ, ಮಾಜಿ ಶಾಸಕ ಆರ್. ರಾಮಚಂದ್ರನ್ (75) ಇಂದು ನಿಧನರಾಗಿದ್ದಾರೆ
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಯಕೃತ್ ಸಂಬಂಧಿತ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಲಾಗಿದೆ.
ರಾಮಚಂದ್ರನ್ ಅವರು ಸಿಪಿಐ ರಾಜ್ಯ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ರಾಮಚಂದ್ರನ್ ಅವರ ನಿಧನಕ್ಕೆ ಅನೇಕ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ.