ನೂತನ ಸಂಸತ್ ಭವನದ ಉದ್ಘಾಟನೆಗೆ ಸಿಪಿಐ(ಎಂ) ಬಹಿಷ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೇ 28ರಂದು ನಡೆಯಲಿರುವ ನೂತನ ಸಂಸತ್‌ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಘೋಷಿಸಿದೆ. ಸಿಪಿಐ(ಎಂ)ನ ರಾಜ್ಯಸಭಾ ಸಂಸದ ಡಾ.ಜಾನ್ ಬ್ರಿಟ್ಟಾಸ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಇದೇ ವೇಳೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಪ್ರಧಾನಿ ಮೋದಿ ಅವರು ರಾಷ್ಟ್ರಪತಿಯನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು. ಹೊಸ ಸಂಸತ್ ಕಟ್ಟಡಕ್ಕೆ ಶಂಕುಸ್ಥಾಪನೆ ವೇಳೆಯೂ ಮೋದಿ ರಾಷ್ಟ್ರಪತಿಯನ್ನು ಕಡೆಗಣನೆ ಮಾಡಿದ್ದರು. ಈಗ ಉದ್ಘಾಟನಾ ಸಮಾರಂಭದಲ್ಲೂ ಅದನ್ನೇ ಮಾಡುತ್ತಿದ್ದಾರೆ ಎಂದರು.

ಈ ಹಿಂದೆ ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದವು. ಮೇ 28ರಂದು ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಆಮ್ ಆದ್ಮಿ ಪಕ್ಷ ಬಹಿಷ್ಕರಿಸಲಿದೆ. ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯನ್ನು ಆಹ್ವಾನಿಸದಿರುವ ಕುರಿತು ಎಎಪಿ ಈ ನಿರ್ಧಾರ ಕೈಗೊಂಡಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. “ಸಂಸತ್ತು ಕೇವಲ ಹೊಸ ಕಟ್ಟಡವಲ್ಲ. ಇದು ಹಳೆಯ ಸಂಪ್ರದಾಯಗಳು, ಮೌಲ್ಯಗಳು, ಪೂರ್ವನಿದರ್ಶನಗಳು ಮತ್ತು ನಿಯಮಗಳೊಂದಿಗೆ ಸ್ಥಾಪನೆಯಾಗಿದೆ. ಇದು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯ. “ನೂತನ ಕಟ್ಟಡದ ಉದ್ಘಾಟನೆ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಅರ್ಥವಾಗುತ್ತಿಲ್ಲ. ಆದ್ದರಿಂದ ನಮ್ಮನ್ನು ಕಡೆಗಣಿಸಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ಮೇ 28ರಂದು ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಕಾಂಗ್ರೆಸ್ ಬಹಿಷ್ಕರಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!