Friday, March 24, 2023

Latest Posts

ಸಿ.ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿ.ಆರ್.ಕೇಶವನ್ ಕಾಂಗ್ರೆಸ್‌ಗೆ ರಾಜಿನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿ.ಆರ್.ಕೇಶವನ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಹಲವಾರು ಅಂಶಗಳ ಕಡೆಗೆ ಗಮನಸೆಳೆದಿದ್ದಾರೆ.

ಕೇಶವನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಪ್ರಸ್ತುತ ಪಕ್ಷದಲ್ಲಿ ನನ್ನ ಎರಡು ದಶಗಳ ಸೇವೆ ಯಾವುದೇ ಕುರುಹು ಕಾಣುತ್ತಿಲ್ಲ. ಪಕ್ಷ ಏನನ್ನು ಪ್ರತಿಪಾದಿಸುತ್ತದೆಯೋ ಅದನ್ನು ನಾನು ಒಪ್ಪುತ್ತೇನೆ. ಆದರೆ ಇನ್ನು ಮುಂದೆ ಪಕ್ಷದಲ್ಲಿ ಮುಂದುವರೆಯಲಾಗದು ಎಂದು ಪತ್ರದಲ್ಲಿ ಉಲ್ಲಖಿಸಿದ್ದಾರೆ.

ನಾನು ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಥಿಕ ಜವಾಬ್ದಾರಿಯನ್ನು ನಿರಾಕರಿಸಿದ್ದೇನೆ ಮತ್ತು ಅದರಿಂದ ದೂರವಿದ್ದೇನೆ. ಭಾರತ್ ಜೋಡೋ ಯಾತ್ರೆಯಲ್ಲೂ ಭಾಗವಹಿಸಿಲ್ಲ. ಹೊಸ ಮಾರ್ಗವನ್ನು ಹುಡುಕಿಕೊಳ್ಳುವ ಸಮಯ ಬಂದಿದೆ. ಆದ್ದರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮತ್ತು ತಮಿಳುನಾಡು ಕಾಂಗ್ರೆಸ್ ಸಮಿತಿ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!