ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ಅಂತ್ಯ ಹಾಡಬೇಕು. ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ. ಇವೆಲ್ಲ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಈ ಸೂಚನೆ ನೀಡಿದ್ದಾರೆ.