ಹೊಸದಿಗಂತ ಡಿಜಿಟಲ್ ಡೆಸ್ಕ್:
ವರನಟ ಡಾ. ರಾಜ್ ಕುಮಾರ್ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್ ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 6 ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.
ಯುವರಾಜ್ ಕುಮಾರ್ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿದ್ದಾರೆ. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನು ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೊಟೀಸ್ ಕೊಟ್ಟಿದ್ದಾರೆ. ಸದ್ಯಕ್ಕೆ ಅಮೆರಿಕಾದಲ್ಲಿ ಶ್ರೀದೇವಿ ನೆಲೆಸಿದ್ದಾರೆ. ಶಾಂತಿನಗರ ಫ್ಯಾಮಿಲಿ ಕೋರ್ಟ್‌ನಲ್ಲಿ ಇದೇ ತಿಂಗಳು 6ನೇ ತಾರೀಕು ವಿಚ್ಛೇದನ ಅರ್ಜಿ ಸಲ್ಲಿಸಿದ್ದರು.
2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು.ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್ ಪುನೀತ್ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು.