spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಡಿಕೇರಿ- ಸಂಪಾಜೆ ನಡುವೆ ಹೆದ್ದಾರಿಯಲ್ಲಿ ಬಿರುಕು: ತಜ್ಞರ ನೆರವು ಪಡೆಯಲು ಸಂಸದ ಪ್ರತಾಪ್ ಸಿಂಹ ಸೂಚನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಮಡಿಕೇರಿ- ಸಂಪಾಜೆ ನಡುವೆ ಹೆದ್ದಾರಿಯಲ್ಲಿ ಬಿರುಕು ಉಂಟಾಗಿದ್ದು, ಭೂಕುಸಿತಕ್ಕೆ ಕಾರಣ ತಿಳಿಯಲು ತಜ್ಞರ ನೆರವು ಪಡೆಯಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ನುಡಿದರು.
ಮಡಿಕೇರಿಯಿಂದ ಮಂಗಳೂರಿಗೆ ತೆರಳುವ ರಸ್ತೆಯಲ್ಲಿ ಉಂಟಾಗುತ್ತಿರುವ ನಿರಂತರ ಭೂಕುಸಿತ ಮತ್ತು ಎರಡನೇ ಮೊಣ್ಣಂಗೇರಿ ಬಳಿ ಹೆದ್ದಾರಿಯಲ್ಲಿ ಬಿರುಕು ಬಿಟ್ಟಿರುವ ಸ್ಥಳ ಪರಿಶೀಲಿಸಿದ ಸಂದರ್ಭ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ಕೊಡಗಿನಲ್ಲಿ ಸತತವಾಗಿ ಮಹಾಮಳೆಯಿಂದಾಗಿ ಭೂಕುಸಿತ ಉಂಟಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗುವುದನ್ನು ತಡೆಯಲು ಮುನ್ನೆಚ್ಚರಿಕೆಯಾಗಿ ಸಂಪಾಜೆಯವರೆಗೆ 18 ಕಡೆಗಳಲ್ಲಿ ತಡೆಗೋಡೆ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಆದರೆ ಮತ್ತೆ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂಕುಸಿತ ಕಂಡು ಬಂದ ಹಿನ್ನಲೆಯಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರ ಸಲಹೆಯಂತೆ ಸಂಪಾಜೆಯವರೆಗೆ ಹೆಚ್ಚುವರಿಯಾಗಿ 22 ಕಡೆ ತಡೆಗೋಡೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದರು.
ತಜ್ಞರಿಂದ ಪರಿಶೀಲನೆ: ಎರಡನೇ ಮೊಣ್ಣಂಗೇರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ರಸ್ತೆ ಮಧ್ಯೆಯೇ ಬಿರುಕು ಬಂದಿರುವುದಕ್ಕೆ ಜಲಸ್ಫೋಟ ಕಾರಣವಾಗಿರಬಹುದೇ ಎಂದು ತಿಳಿದುಕೊಳ್ಳಬೇಕಾಗಿದ್ದು, ಈ ನಿಟ್ಟಿನಲ್ಲಿ ತಜ್ಞರಿಂದ ಮಣ್ಣು ಪರೀಕ್ಷೆ ಮತ್ತು ಸ್ಥಳ ಪರಿಶೀಲನೆ ಕೈಗೊಂಡು ನೈಜವಾದ ಕಾರಣ ಕಂಡುಕೊಳ್ಳಲಾಗುತ್ತದೆ ಎಂದು ಪ್ರತಾಪ್ ಸಿಂಹ ತಿಳಿಸಿದರು.
ಹೆದ್ದಾರಿಯಲ್ಲಿ ವಾಹನಗಳ ಸಂಚಾರದ ಒತ್ತಡ ಹೆಚ್ಚಾಗಿರುವುದೂ ರಸ್ತೆ ಬಿರುಕು ಹಾಗೂ ಭೂಕುಸಿತಕ್ಕೆ ಕಾರಣವೇ ಎಂದು ಪರಿಣಿತರ ತಂಡದ ಪರಿಶೀಲನೆ ನಂತರ ಗೊತ್ತಾಗಲಿದೆ ಎಂದೂ ಅವರು ನುಡಿದರು.
ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮತ್ತಿತರರು ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss