April 4, 2026
Saturday, April 4, 2026
spot_img

ಸಿಎಚ್ ಪೌಡರ್ ಅಕ್ರಮ ಸಾಗಾಟಕ್ಕೆ ಕಡಿವಾಣ: ಗಡಿಯಲ್ಲಿ ಶಾಶ್ವತ ಚೆಕ್‌ಪೋಸ್ಟ್ ಸ್ಥಾಪನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಕ್ಕೆ ಹೊರರಾಜ್ಯಗಳಿಂದ ಅಕ್ರಮವಾಗಿ ತರಲಾಗುತ್ತಿರುವ ಕ್ಲೋರಲ್ ಹೈಡ್ರೇಟ್ (CH) ಪೌಡರ್ ಸಾಗಾಟವನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಗೋವಾ, ತೆಲಂಗಾಣ ಮತ್ತು ಆಂಧ್ರ ಪ್ರದೇಶ ಗಡಿ ಭಾಗಗಳಲ್ಲಿ ಶಾಶ್ವತ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಸಿಎಚ್ ಪೌಡರ್ ಅಕ್ರಮ ಸಾಗಾಟದ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದರು. ಈ ಅವಧಿಯಲ್ಲಿ ಒಟ್ಟು 1,117 ಪ್ರಕರಣಗಳು ದಾಖಲಾಗಿದ್ದು, ಸಂಬಂಧಿಸಿದಂತೆ 771 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಸಿಎಚ್ ಪೌಡರ್ ದುರುಪಯೋಗವಾಗದಂತೆ ತಡೆಯಲು ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳು ನಿರಂತರ ನಿಗಾವಹಿಸುತ್ತಿವೆ. ಗಡಿ ಪ್ರದೇಶಗಳಲ್ಲಿ ತಪಾಸಣೆ ಹೆಚ್ಚಿಸಿ ಅಕ್ರಮ ಸಾಗಾಟಕ್ಕೆ ಸಂಪೂರ್ಣ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !