ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಭವನವನ್ನು ಅತಿ ಹೆಚ್ಚು ದುರುಪಯೋಗ ಪಡಿಸಿಕೊಂಡ ಕೀರ್ತಿ ಕಾಂಗ್ರೆಸ್ ಪಾಲಾಗಿದೆ. ದೇಶದಲ್ಲಿ 56ಕ್ಕೂ ಹೆಚ್ಚು ಬಾರಿ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರಗಳನ್ನು ಪತನಗೊಳಿಸಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಇಂದು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅತಿ ಹೆಚ್ಚು ವಿವಾದಾತ್ಮಕ ಹಾಗೂ ಪ್ರಶ್ನಾರ್ಹ ರಾಜ್ಯಪಾಲರಾಗಿದ್ದ ಗ್ರೇಟ್ ಹಂಸರಾಜ ಭಾರದ್ವಾಜ್ ಅವರು ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಏನೂ ಪ್ರಕರಣ ಇಲ್ಲದೇ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ್ದರು. ಈಗ ಆ ಪ್ರಕರಣ ಮುಚ್ಚಿಹೋಗಿದೆ. ಕಾಂಗ್ರೆಸ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.