CRICKET | ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಆಟಗಾರನಿಂದ ಐತಿಹಾಸಿಕ ಸಾಧನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಒಂದು ವಿಕೆಟ್ ಪಡೆದಿದ್ದ ಅಶ್ವಿನ್, ಎರಡನೇ ಇನ್ನಿಂಗ್ಸ್‌ನ ಆರಂಭದಲ್ಲಿ ಮೂರು ವಿಕೆಟ್ ಪಡೆದರು. ಈ ಮೂರು ವಿಕೆಟ್‌ಗಳಿಂದ ಅವರು ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಅಂದರೆ ರವಿಚಂದ್ರನ್ ಅಶ್ವಿನ್ ಈಗ ಭಾರತದಲ್ಲಿ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಬರೆದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆಯನ್ನು ಟೀಂ ಇಂಡಿಯಾದ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಹೆಸರಿನಲ್ಲಿ ಈ ದಾಖಲೆ ಇತ್ತು.

ಭಾರತ ಪರ 63 ಟೆಸ್ಟ್ ಪಂದ್ಯಗಳನ್ನಾಡಿರುವ ಅನಿಲ್ ಕುಂಬ್ಳೆ 350 ವಿಕೆಟ್ ಪಡೆದು ಮಿಂಚಿದ್ದರು. ಇದರೊಂದಿಗೆ ಕುಂಬ್ಳೆ, ತವರು ನೆಲದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದಿದ್ದರು.

ರವಿಚಂದ್ರನ್ ಅಶ್ವಿನ್ ಅವರು ಅನಿಲ್ ಕುಂಬ್ಳೆ ಅವರ ವಿಶೇಷ ದಾಖಲೆಯನ್ನು ಮುರಿದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಹೆಚ್ಚುವರಿಯಾಗಿ, ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳನ್ನು ಪಡೆದ ಏಕೈಕ ಭಾರತೀಯ ಬೌಲರ್ ಅಶ್ವಿನ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!