ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿರಾಟ್ ಕೊಹ್ಲಿ ಜೊತೆ ಕ್ರಿಕೆಟ್ ಜೀವನ ಆರಂಭಿಸಿದ ತರುವರ್ ಕೊಹ್ಲಿ ಇದೀಗ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. 2008ರ ಅಂಡರ್-19 ವಿಶ್ವಕಪ್‌ನಲ್ಲಿ ಭಾರತದ ಗೆಲುವಿನಲ್ಲಿ ತರುವರ್ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಪಂಜಾಬ್ ಆಟಗಾರನಿಗೆ ಭಾರತ ತಂಡದಲ್ಲಿ ಅವಕಾಶ ಸಿಗಲಿಲ್ಲ. ಇದೀಗ 35ರ ವಯಸ್ಸಲ್ಲಿ ಕ್ರಿಕೆಟ್ ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ದೇಶಿಯ ಕ್ರಿಕೆಟ್‌ನಲ್ಲಿ ಒಟ್ಟು 184 ಪಂದ್ಯಗಳನ್ನು ಆಡಿರುವ ತರುವರ್ ಕೊಹ್ಲಿ ಅತ್ಯುತ್ತಮ ಆಲ್‌ರೌಂಡರ್ ಆಗಿದ್ದರು. ತರುವರ್ ಅವರು 55 ಪ್ರಥಮ ದರ್ಜೆ ಪಂದ್ಯಗಳು, 72 ಲಿಸ್ಟ್ ಎ ಪಂದ್ಯಗಳು ಮತ್ತು 57 T20I ಪಂದ್ಯಗಳಲ್ಲಿ ಮೂರು ಮಾದರಿಗಳಲ್ಲಿ ಒಟ್ಟು 7543 ರನ್ ಗಳಿಸಿದ್ದಾರೆ. ಅಲ್ಲದೆ 133 ವಿಕೆಟ್‌ಗಳನ್ನು ಗಳಿಸಿದ್ದಾರೆ.